HomeKarnatakaBREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ.

ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ.  ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular