HomeKarnatakaBREAKING : ಬೆಂಗಳೂರಿನಲ್ಲಿ ಹೀನ ಕೃತ್ಯ ; 6 ವರ್ಷದ ಮೊಮ್ಮಗಳ ಮೇಲೆಯೇ ಅತ್ಯಾಚಾರ ಎಸಗಿದ...

BREAKING : ಬೆಂಗಳೂರಿನಲ್ಲಿ ಹೀನ ಕೃತ್ಯ ; 6 ವರ್ಷದ ಮೊಮ್ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಾತ..!

ಬೆಂಗಳೂರು : ಮೊಮ್ಮಗಳ ಮೇಲೆ ತಾತನೇ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಕ್ರವರ್ತಿ (60) ಎಂಬ ವೃದ್ದ ಸುಮಾರು 6 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ ತಾತನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದು, ತಾತನಿಗೆ ಸಹಕಾರ ನೀಡಿದ ಮಗುವಿನ ತಂದೆ ರಂಜಿತ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹುಳಿಮಾವು ಸಮೀಪದ ವೇಣುಗೋಪಾಲ್ ನಗರದಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ತಾಯಿ ಕೆಲಕ್ಕೆ ಹೋಗಿದ್ದ ವೇಳೆ 60 ವರ್ಷದ ಚಕ್ರವರ್ತಿ, 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿ ತಾಯಿಗೆ ಮನೆ ಮಗುವಿನ ಹೆಸರಿಗೆ ಬರೆಯುತ್ತೇವೆ, ಚಿನ್ನದ ಕೊಡಿಸುತ್ತೇವೆ ಎಂದು ಧಮ್ಕಿ ಹಾಕಿದ್ದರು. ಘಟನೆ ಸಂಬಂಧ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಗುವಿನ ತಂದೆ ರಂಜಿತ್ ಕುಮಾರ್ನನ್ನು ಆರೋಪಿಗಳು ಪರಾರಿಯಾಗಲು ಸಹಾಯ ಮಾಡಿದ ಆರೊಪದಡಿ ಬಂದಿಸಿದ್ದು, ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular