ಐಝಾಲ್: ಅಸ್ಸಾಂ ರೈಫಲ್ಸ್ ಮತ್ತು ಮಿಜೋರಾಂ ಪೊಲೀಸರು ಚಂಫೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್ ಮತ್ತು ಕಳ್ಳಸಾಗಣೆ ಮಾಡಿದ ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಪ್ಯಾರಾಮಿಲಿಟರಿ ಪಡೆ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.
ನಿರ್ದಿಷ್ಟ ಮಾಹಿತಿಯ ಮೇರೆಗೆ, ಪ್ಯಾರಾಮಿಲಿಟರಿ ಪಡೆ ಮತ್ತು ಮಿಜೋರಾಂ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಬುಧವಾರ ಚಂಫೈನ ಪೊಲೀಸ್ ಚೆಕ್ ಗೇಟ್‌ನಲ್ಲಿ ಶೋಧ ನಡೆಸಿದಾಗ 1 ಕಿಲೋಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. 8.58 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕಳ್ಳಸಾಗಣೆ ಮಾಡಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.