ಬೆಂಗಳೂರು: ನಿಗದಿಯಂತೆಯೇ ನವೆಂಬರ್ 30ರಂದೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆ.ಎಸ್.ಸಿ.ಎ.) ಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.
ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಡಿಸೆಂಬರ್ 30ರವರೆಗೆ ಚುನಾವಣೆ ನಡೆಸದಂತೆ ಸೆಷನ್ಸ್ ಕೋರ್ಟ್ ನಿಂದ ಮಧ್ಯಂತರ ಆದೇಶ ನೀಡಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆ.ಎಸ್.ಸಿ.ಎ. ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಕೆ.ಎಸ್.ಸಿ.ಎ. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆಷನ್ ಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಕೆ.ಎಸ್.ಸಿ.ಎ. ವಾದ ಆಲಿಸದೇ ಆದೇಶ ಪ್ರಕಟಿಸಲಾಗಿದೆ ಎಂದು ಕೆ.ಎಸ್.ಸಿ.ಎ. ವಾದ ಮಂಡಿಸಿತ್ತು. ನಾವು ವೇಳಾಪಟ್ಟಿಯಂತೆ ಕೆ.ಎಸ್.ಸಿ.ಎ.ಗೆ ಚುನಾವಣೆ ನಡೆಸಲು ಬದ್ಧವಾಗಿದ್ದೇವೆ. ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದಂತೆ ಚುನಾವಣೆ ನಡೆಸಲು ಬದ್ಧವಾಗಿದ್ದೇವೆ ಎಂದು ಹೇಳಿದ್ದು, ವಿಚಾರಣೆ ನಡೆಸಿದ ಹೈಕೋರ್ಟ ನಿಂದ ಸೆಷನ್ಸ್ ಕೋರ್ಟ್ ಆದೇಶವನ್ನು ರದ್ದುಗೊಳಿಸಲಾಗಿದೆ.
