BREAKING : ‘PSI’ ಗೆ ಮರು ಪರೀಕ್ಷೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : 545 ಪಿಎಸ್ಐ ಹುದ್ದೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಇದೀಗ ಹೈಕೋರ್ಟ್ ಪ್ರಕಟಿಸಿದೆ.

ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಆದೇಶ ಹೊರಡಿಸಿದೆ.

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್  ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ, ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಮೆಟ್ಟಿಲೇರಿದ್ದಂತ ಅಭ್ಯರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read