BREAKING : ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಆರೋಪ : ವಕೀಲ ದೇವರಾಜೇಗೌಡ ವಿರುದ್ಧದ ‘FIR’ ರದ್ದು ಮಾಡಿ ಹೈಕೋರ್ಟ್ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೋರಿ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಪೀಠ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ತನಿಖಾಧಿಕಾರಿಗಳಿಗೆ ಸೂಚನೆ ನೀಡಿತು. ಇದೀಗ ಎಫ್ ಐ ಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಅರ್ಜಿದಾರರ ವಿರುದ್ಧ ಪೊಲೀಸರು ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ” ಎಂದು ವಕೀಲರು ಆಕ್ಷೇಪಿಸಿದರು. ಇದಕ್ಕೆ ನ್ಯಾಯಪೀಠ, “ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು. ಇಂದು ಎಫ್ ಐ ಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read