ಬೆಂಗಳೂರು: ಅಕ್ರಮ ಶಸ್ತ್ರಾಸ್ರ ಕಾಯ್ದೆಯಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆ ನೀಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಎಫ್ಐಆರ್ ಗೆ ತಡೆ ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಏರ್ ಗನ್ ಗೆ ಲೈಸೆನ್ಸ್ ಅಗತ್ಯವಿಲ್ಲದಿದ್ದರೂ ಪ್ರಕರಣ ದಾಖಲಿಸಲಾಗಿದೆ ಎಂದು ವಾದಿಸಿದ್ದರು. ಹೈಕೋರ್ಟ್ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ನವೆಂಬರ್ ಮೂರನೇ ವಾರಕ್ಕೆ ಮುಂದೂಡಿದೆ.
