ಧಾರವಾಡ: ಡಾ. ಕೇಶವ ಅಬ್ಬಯ್ಯ ಅವರ ವರ್ಗಾವಣೆ ರದ್ದು ಆದೇಶಕ್ಕೆ ಧಾರವಾಡ ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ತಡೆ ನೀಡಲಾಗಿದೆ.
ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹೋದರ ಡಾ. ಕೇಶವ ಅಬ್ಬಯ್ಯ ಅವರ ವರ್ಗಾವಣೆ ರದ್ದು ಆದೇಶಕ್ಕೆ ತಡೆ ನೀಡಲಾಗಿದೆ. ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಗದಗದ ಮೆಡಿಕಲ್ ಕಾಲೇಜಿನಿಂದ ಡಾ. ಕೇಶವ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ದಂತ ವಿಭಾಗಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆ ಆದೇಶವನ್ನು ರದ್ದು ಮಾಡುವಂತೆ ಡಾ. ಸುನಿಲ್ ಪಾಟೀಲ್ ಅರ್ಜಿ ಸಲ್ಲಿಸಿದ್ದರು. ಧಾರವಾಡ ಹೈಕೋರ್ಟ್ ಪೀಠದಲ್ಲಿ ಸಲ್ಲಿಕೆಯಾದ ರಿಟ್ ಅರ್ಜಿ ವಿಚಾರಣೆ ನಡೆಸಿದ ಪೀಠ ಡಿಸೆಂಬರ್ 15ರಂದು ವರ್ಗಾವಣೆ ಆದೇಶ ರದ್ದು ಮಾಡಿತ್ತು. ಇದೀಗ ದ್ವಿಸದಸ್ಯ ಪೀಠದಿಂದ ವರ್ಗಾವಣೆ ರದ್ದು ಆದೇಶಕ್ಕೆ ತಡೆ ನೀಡಲಾಗಿದೆ.

