HomeLatest NewsBREAKING: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

BREAKING: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.

 ಬನ್ನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ. ನಾಗೇಂದ್ರಪ್ಪ ಸೇರಿ ಇತರರ ವಿರುದ್ಧ ಕೇಸು ದಾಖಲಾಗಿದೆ. ಎಸ್. ಬೆಂಗೀಪುರದಲ್ಲಿ ಅಕ್ರಮ ವಲಸಿಗರ ಶೆಡ್ ಗಳ ಮೇಲೆ ದಾಖಲೆ ಕೇಳಿ ದಾಳಿ ನಡೆಸಲಾಗಿತ್ತು. ಜಾಗದ ಮಾಲೀಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿತ್ತು. ಜೀವ ಬೆದರಿಕೆ ಹಾಕಿರುವುದಾಗಿ ಪುನೀತ್ ಮತ್ತು ಸಹಚರರ ವಿರುದ್ಧ ದೂರು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆಗಾಗಿ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular