BREAKING : ಉಪವಾಸ ಸತ್ಯಾಗ್ರಹ ಕೈಬಿಟ್ಟ ಹಿಂದೂ ಕಾರ್ಯಕರ್ತ `ಪುನೀತ್ ಕೆರೆಹಳ್ಳಿ’| Puneeth Kerehalli

ಬೆಂಗಳೂರು : ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾನೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ಪಷ್ಟಿಕರಣ ನೀಡುವಂತೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹ ಅಂತ್ಯಮಾಡಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಪುನೀತ್ ಕೆರೆಹಳ್ಳಿ, ಮಿಥುನ್ ಚಕ್ರವರ್ತಿ ಅಣ್ಣನವರ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ ಮಾಡುತಿದ್ದೇನೆ ಹಾಗೂ ಕಾನೂನು ಹೋರಾಟ ಮುಂದುವರಿಸುತ್ತೇವೆ. ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದ ತಹಸೀಲ್ದಾರರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಅ.3 ರಂದು ಉಪ್ಪಾರಪೇಟೆ ಠಾಣೆ ಪೊಲೀಸರು ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read