BREAKING: ಬಾಂಗ್ಲಾ ನ್ಯಾಯಾಲಯದ ಆವರಣದಲ್ಲೇ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಪರ ವಕೀಲನ ಬರ್ಬರ ಹತ್ಯೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿರುವ ಮಧ್ಯೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬಂಧನಕ್ಕೊಳಗಾಗಿರುವ ಹಿಂದೂ ಅರ್ಚಕ ಚಿನ್ಮೋಯ್‌ ಕೃಷ್ಣದಾಸ್‌ ಅವರ ಪರ ವಕೀಲನನ್ನು ಹತ್ಯೆ ಮಾಡಲಾಗಿದೆ.

ರಿಪಬ್ಲಿಕ್ ಟಿವಿ ಪ್ರಕಾರ, ಇಂದು ಬಾಂಗ್ಲಾದೇಶದ ನ್ಯಾಯಾಲಯದ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ಪರ ವಕೀಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನವನ್ನು ವಿರೋಧಿಸಿ ಬಾಂಗ್ಲಾದೇಶದ ಚಟ್ಟೋಗ್ರಾಮ್ ನ್ಯಾಯಾಲಯದ ಹೊರಗೆ ಬೃಹತ್ ಜನಸಮೂಹವು ಹಾಜರಿತ್ತು, ಈ ವೇಳೆ ಪೊಲೀಸರು ದಬ್ಬಾಳಿಕೆ ಆರಂಭಿಸಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.

ಬಾಂಗ್ಲಾದೇಶದ ಸನಾತನ ಜಾಗರೋನ್ ಜೋಟ್‌ನ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ ಬೆಂಬಲಿಗರು ಜೈಲಿಗೆ ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದಾಗ ಅವರ ಪರ ವಕೀಲ ಸೈಫುಲ್ ಇಸ್ಲಾಂ ಅಲಿಫ್ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಪೊಲೀಸರು ಜನರನ್ನು ಚದುರಿಸಲು ಮುಂದಾದಾಗ ಈ ಘಟನೆ ನಡೆದಿದ್ದು, ಕನಿಷ್ಠ 7-8 ಮಂದಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read