ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣ ಬಂದ್ ಮಾಡಲಾಗುವುದು.
ವರ್ತಕರ ಸಂಘದಿಂದ ನಾಳೆ ಬಂದ್ ಘೋಷಣೆ ಮಾಡಲಾಗಿದೆ. ನಾಳೆ ಹೊಳೆನರಸೀಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ವರ್ತಕರ ಸಂಘ ನಾಳೆ ಬಂದ್ ಘೋಷಣೆ ಮಾಡಿದ್ದು, ನಾಳೆ ಹೊಳೆನರಸೀಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು, ಹೋಟೆಲ್ ಸೇರಿ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಮಾಡಲಾಗುವುದು. ನಾಳೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂದ್ ಮಾಡಲಾಗುವುದು ಎನ್ನಲಾಗಿದೆ.
ಶಾಲೆಗಳಿಗೆ ರಜೆ ಘೋಷಣೆ
ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಭಾರೀ ಜನ ಸೇರುವ ಸಾಧ್ಯತೆ ಇರುವುದರಿಂದ ನಾಳೆ ಹೊಳೆನರಸೀಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

