HomeLatest NewsBREAKING: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಸೇರಿ 4 ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ...

BREAKING: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಸೇರಿ 4 ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ 4 ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.

ರಾಜ್ಯದಲ್ಲಿ ಆಗಸ್ಟ್ 27ರಿಂದ 3-4 ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲಿಯೂ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಪುತ್ತೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಿ ಆದೇಶ ಹೊರಡಿಸಲಾಗಿದೆ.  ಉಳ್ಳಾಲ, ಬಂಟ್ವಾಳ, ಮುಲ್ಕಿ. ಮೂಡಬಿದರೆ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲಾಗಿದೆ. ಆಯಾ ತಹಶೀಲ್ದಾರ್ ಗಳಿಂದ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ ಹಾಗೂ ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಉಡುಪಿ

ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಆ. 28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular