HomeKarnatakaBREAKING : ಸದನದಲ್ಲಿ ಕೋಲಾಹಲ ಸೃಷ್ಟಿಸಿದ 'ಹನಿಟ್ರ್ಯಾಪ್' ವಿಚಾರ : ಸ್ಪೀಕರ್ ಮೇಲೆ ಪೇಪರ್ ಪೀಸ್...

BREAKING : ಸದನದಲ್ಲಿ ಕೋಲಾಹಲ ಸೃಷ್ಟಿಸಿದ ‘ಹನಿಟ್ರ್ಯಾಪ್’ ವಿಚಾರ : ಸ್ಪೀಕರ್ ಮೇಲೆ ಪೇಪರ್ ಪೀಸ್ ಎಸೆದು ಬಿಜೆಪಿ ಆಕ್ರೋಶ.!

ಬೆಂಗಳೂರು : ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಕೋಲಾಹಲ ಸೃಷ್ಟಿಸಿದ್ದು, ಸ್ಪೀಕರ್ ಮೇಲೆ ಪೇಪರ್ ಎಸೆದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವನ್ನು ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ವಿಧಾನಸಭೆಯಲ್ಲಿ ತೀವ್ರ ಗದ್ದಲ ಮಾಡಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಮೇಲೆ ಪೇಪರ್ ಪೀಸ್ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ ಮೇಲೆಯೂ ವಿಪಕ್ಷಗಳ‌ ಶಾಸಕರು ಸದನದಲ್ಲಿ ಪುನ: ಅದನ್ನೇ ಪ್ರಸ್ತಾಪಿಸುವುದು ತರವಲ್ಲ. ಇಂತಹ ಪ್ರಕರಣದಲ್ಲಿ ಯಾರೇ ತೊಂದರೆಗೆ ಒಳಗಾಗಿದ್ದರೂ ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು.

ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದಸ್ಯರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ನೋವಿನ ವಿಚಾರ. ರಾಜ್ಯದ ಕೋಟ್ಯಂತರ ಜನರ ಆಶೋತ್ತರಗಳನ್ನು, ದುಃಖ ದುಮ್ಮಾನಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿರುವುದು ನಮ್ಮ ಕರ್ತವ್ಯ. ಇದಕ್ಕೆ ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ನಮ್ಮ ಜೊತೆ ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular