ದಾವಣಗೆರೆ: ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ರೈತ ಒಕ್ಕೂಟ ಹಾಗೂ ಬಿಜೆಪಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಬಂದ್ ಗೆ ಕರೆ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಬಂದ್ ನಡೆಯಲಿದೆ. ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಗಿದ್ದು, ಬೆಂಬಲ ಬೆಲೆ ಘೋಷಣೆ ಮಾಡುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎನ್ನಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
