ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದಲ್ಲಿ ಗರ್ಭಿಣಿ ಮಾನ್ಯಾ ಪಾಟೀಲ್ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೋಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಸಪ್ಪ ಸೋಲಾರಗೊಪ್ಪ, ಅನಿಲಗೌಡ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಮರ್ಯಾದಾಗೇಡು ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಡಿ. 21ರಂದು ಮಾನ್ಯಾ ಪಾಟೀಲ್ ಅವರನ್ನು ಅವರ ತಂದೆ ಕೊಚ್ಚಿ ಕೊಲೆ ಮಾಡಿದ್ದ. 7 ತಿಂಗಳ ಗರ್ಭಿಣಿ ಮಾನ್ಯಾ ಕೊಲೆ ಮಾಡಿದ್ದ 8 ಮಂದಿಯನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

