BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು, ಬಸ್ ಬೆಂಕಿಗೆ ಆಹುತಿ

ವಿಜಯಪುರ : ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಬಸ್ ಬೆಂಕಿಗೆ ಆಹುತಿಯಾದ ಘಟನೆ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ನಡೆದಿದೆ.

ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಗೆ ಬೆಂಕಿ ತಗುಲಿದೆ.ಕೂಡಲೇ ಜನರು ಪ್ರಾಣ ಉಳಿಸಿಕೊಳ್ಳಲು ಬಸ್ ನಿಂದ ಜಿಗಿದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಇಡೀ ಬಸ್ ಸುಟ್ಟು ಕರಕಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿತ್ತು, ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read