HomeKarnatakaBREAKING : ಬೆಂಗಳೂರಿನ ಫ್ಲೈ ಓವರ್ ಮೇಲೆ ಭೀಕರ ಅಪಘಾತ ; 'ಎಲಿವೇಟೆಡ್ ಫ್ಲೈ ಓವರ್...

BREAKING : ಬೆಂಗಳೂರಿನ ಫ್ಲೈ ಓವರ್ ಮೇಲೆ ಭೀಕರ ಅಪಘಾತ ; ‘ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿ’ ದುರ್ಮರಣ..!

ಬೆಂಗಳೂರು : ಬೆಂಗಳೂರಿನ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರನ್ನ ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿ  P. ಮಂಜುನಾಥ್ (52) ಎಂದು ಗುರುತಿಸಲಾಗಿದೆ.  ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಲ್ಲಿ ಕಾರೊಂದು ಕೆಟ್ಟು ನಿಂತಿತ್ತು, ಕಾರು ಟಾಯಿಂಗ್ ಮಾಡಬೇಕು ಎನ್ನುವ ವೇಳೆ ಮಂಜುನಾಥ್ ಅವರಿಗೆ ಟಾಟಾ ಏಸ್ ವಾಹನ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 2 ಕಾರುಗಳು ಜಖಂ ಆಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular