ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಹಾಗೂ ಈ ಅವಘಡದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ಕಾರ್ಖಾನೆಯೊಳಗೆ ನಾಲ್ಕು ಬಾಯ್ಲರ್ಗಳು ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಡೊಂಬಿವ್ಲಿ MIDC ಪ್ರದೇಶದ 2 ನೇ ಹಂತದಲ್ಲಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿಯಿಂದಾಗಿ ಕಾರ್ಖಾನೆಯಲ್ಲಿ ಸಂಗ್ರಹವಾಗಿರುವ ರಾಸಾಯನಿಕಗಳು ಉರಿದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿದೆ.ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
#BreakingNews: महाराष्ट्र के डोंबिवली में बड़ा हादसा, केमिकल फैक्ट्री में ब्लास्ट से लगी आग#Maharashtra #Fire | @priyasi90 pic.twitter.com/NXolloNXqP
— Zee News (@ZeeNews) May 23, 2024