
ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರು ಡಿಕ್ಕಿಯಾಗಿದೆ. ಮೃತರನ್ನು ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂದು ಗುರುತಿಸಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಶಿ ಪಾಟೀಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅಜಾಗರೂಕತೆ ಹಾಗೂ ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

