ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗದ ಹೃಷಿಕೇಶ್-ಬದರೀನಾಥ್ ಹೆದ್ದಾರಿಯಲ್ಲಿ ಶನಿವಾರ ಸುಮಾರು 17 ಪ್ರಯಾಣಿಕರನ್ನು ಹೊತ್ತ ಟೆಂಪೊ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಸುಮಾರು 9 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದೆ.
ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯವನ್ನು ನಡೆಸುತ್ತಿವೆ ಎಂದು ಎಎನ್ಐ ವರದಿ ಮಾಡಿದೆ. ಈವರೆಗೆ ಗಾಯಗೊಂಡ ಇಬ್ಬರನ್ನು ತಂಡಗಳು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿವೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, “ರುದ್ರಪ್ರಯಾಗ್ ಜಿಲ್ಲೆಯಲ್ಲಿ ಟೆಂಪೊ ಟ್ರಾವೆಲರ್ ಅಪಘಾತದ ಬಗ್ಗೆ ತುಂಬಾ ದುಃಖದ ಸುದ್ದಿ ಬಂದಿದೆ. ಸ್ಥಳೀಯ ಆಡಳಿತ ಮತ್ತು ಎಸ್ಡಿಆರ್ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಆದೇಶಿಸಲಾಗಿದೆ ಎಂದಿದ್ದಾರೆ.
https://twitter.com/i/status/1801882725202202706