ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪಾದಚಾರಿ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಸಿಯಾಜ್ ಕಾರ್ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಕಾರ್ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಆರ್‌ಎಂವಿ ಬಡಾವಣೆಯ ಬಳಿ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯ ರಭಸಕ್ಕೆ ಹಾರಿ ಬಿದ್ದು 64 ವರ್ಷದ ರಾಮಚಂದ್ರ ರೆಡ್ಡಿ ಮೃತಪಟ್ಟಿದ್ದಾರೆ.
ಮೊದಲಿಗೆ ಪಾದಚಾರಿ ವೃದ್ಧನಿಗೆ ಕಾರ್ ಡಿಕ್ಕಿ ಹೊಡೆದಿದೆ. ನಂತರ ಆರ್.ಎಂ.ವಿ. ಪಾರ್ಕಿಂಗ್ ಕ್ಲಬ್ ನಲ್ಲಿ ನಿಂತಿದ್ದ ಎರ್ಟಿಗಾ ಕಾರ್ ಮತ್ತು 5 -6 ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಯುವಕ, ಯುವತಿಗೆ ಗಂಭೀರ ಗಾಯಗಳಾಗಿವೆ. ಏರ್ ಬ್ಯಾಗ್ ಇದ್ದರೂ ಸಹ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವಕ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜಯನಗರ ಸಂಚಾರ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

