ಮಂಗಳೂರು: ಪತ್ನಿ ಸೀಮಂತದಂದೇ ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಿತ್ತನಡ್ಕ ಬಳಿ ನಡೆದಿದೆ.
ಸತೀಶ್(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಿತ್ತನಡ್ಕ ಬಳಿ ಪತ್ನಿ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎಲ್ಲರೂ ಸೀಮಂತ ಕಾರ್ಯದ ಸಿದ್ಧತೆಯಲ್ಲಿ ತೊಡಗಿದ್ದ ವೇಳೆ ಮನೆಯಲ್ಲಿ ಏಕಾಏಕಿ ಸತೀಶ್ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸತೀಶ್ ಮೃತಪಟ್ಟಿದ್ದಾರೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.