
ಮೃತನನ್ನು ಅಸ್ಸಾಂ ಮೂಲದ ಕಾರ್ಮಿಕ ಮುಜಿಬುರ್ ಎಂದು ಗುರುತಿಸಲಾಗಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ಈ ದುರ್ಘಟನೆ ಸಂಭವಿಸಿದೆ. ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಣ್ಣಿನ ದಿಬ್ಬ ಕುಸಿದಿದೆ. ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕ ಮುಜಿಬುರ್ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

