BREAKING : ತುಮಕೂರಿನಲ್ಲಿ ದಾರುಣ ಘಟನೆ ; ವಿವಾಹಿತ ಪುರುಷನ ಜೊತೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ತುಮಕೂರು : ವಿವಾಹಿತ ಪುರುಷನ ಜೊತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅನನ್ಯ (19) ಎಂಬ ಕಾಲೇಜು ವಿದ್ಯಾರ್ಥಿನಿ ರಂಗಶಾಮಣ್ಣ (50) ಎಂಬುವವರನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಿಯಕರ ಜೊತೆ ಕಳೆದ 3 ದಿನದ ಹಿಂದೆ ಓಡಿಹೋಗಿದ್ದಳು.

ಆದರೆ ಇಂದು ಕೆರೆಯ ದಡದಲ್ಲಿ ಕಾರು, ಇಬ್ಬರ ಚಪ್ಪಲಿ, ಮೊಬೈಲ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read