HomeKarnatakaBREAKING: ಮಧ್ಯರಾತ್ರಿ ಭೀಕರ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

BREAKING: ಮಧ್ಯರಾತ್ರಿ ಭೀಕರ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

ಬೆಂಗಳೂರು: ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರಿನ ಜಯಮ್ಮ(60) ಯಶೋದಮ್ಮ(60), ಗಂಗಾ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಟಿಟಿ ವಾಹನ ಚಾಲಕ ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿವೆ. ಕೆಂಪಮ್ಮ ಎಂಬುವರಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರಿನ ಸ್ತ್ರೀಶಕ್ತಿ ಸಂಘದ ಮಹಿಳೆಯರು ಕಾಶಿ ಯಾತ್ರೆಗೆ ಹೊರಟಿದ್ದು, ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular