HomeLatest NewsBREAKING : ದಾವಣಗೆರೆಯಲ್ಲಿ ಘೋರ ದುರಂತ : ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು...

BREAKING : ದಾವಣಗೆರೆಯಲ್ಲಿ ಘೋರ ದುರಂತ : ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ.!

ದಾವಣಗೆರೆ : ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಸಿಂಧುಶ್ರೀ (4), ಶ್ರೀಜಯ್ (3) ಎಂದು ಗುರುತಿಸಲಾಗಿದೆ. ಉದಯ್ (35) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಉದಯ್ ಪತ್ನಿ 3 ತಿಂಗಳ ಹಿಂದೆ ಮೃತಪಟ್ಟಿದ್ದರು. ನಂತರ ಖಿನ್ನತೆಗೊಳಗಾಗಿ ಪತಿ ಉದಯ್ ಇಬ್ಬರು ಮಕ್ಕಳನ್ನು ಕೊಂದು ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular