ಕಾರವಾರ: ಅಡುಗೆ ಅನಿಲ ಸೋರಿಕೆಯಾಗಿ ಮನೆ ದಿಢೀರ್ ಹೊತ್ತಿ ಉರಿದಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ಸುದರ್ಶನ ಎಂಬುವರ ಮನೆ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ 12 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಂಕೋಲಾ ಸಿಪಿಐ ಹಿರೇಮಠ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

