HomeLatest News BREAKING: ಮನೆಗೆಲಸದವನಿಂದ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಆತ್ಮಹತ್ಯೆ

 BREAKING: ಮನೆಗೆಲಸದವನಿಂದ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಆತ್ಮಹತ್ಯೆ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

65 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಬಳಿಕ ನೇಣು ಹಾಕಿಕೊಂಡು ಆರೋಪಿ ದೇವರಾಜ್(50) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಗೆಲಸ ಮಾಡುತ್ತಿದ್ದ ದೇವರಾಜ್ ಕೃತ್ಯವೆಸಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೃತ್ಯ ನಡೆದಾಗ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಪುತ್ರಿ ಇದ್ದರು. ಮುಂಜಾನೆ ಮಹಿಳೆಯ ಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮೈಕೋ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular