ಬೆಂಗಳೂರು: ಬೆಂಗಳೂರಿನ ಹೆಣ್ಣುರಿನಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಮೂಲದ ಸುಮನ್(22) ಮೃತಪಟ್ಟ ಮಹಿಳೆ.
ಪತಿ ಶಿವಂ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆಯೇ ಸುಮನ್ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆ ಮಾಲೀಕ ಬಾಡಿಗೆ ಕೇಳಲು ಬಂದಾಗ ಪ್ರಕರಣ ಬಯಲಿಗೆ ಬಂದಿದೆ. ಪತ್ನಿ ಮೃತಪಟ್ಟರೂ ಶಿವಂ ಜೊತೆಯಲ್ಲಿಯೇ ಇದ್ದ. ಮರಣೋತ್ತರ ಪರೀಕ್ಷೆಗಾಗಿ ಮತ್ತೆ ಶವವನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪತಿ ಶಿವಂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.