BREAKING : ರಾಜ್ಯದಲ್ಲಿ ಮುಂದುವರೆದ ಮಾನವ –ವನ್ಯಜೀವಿಗಳ ಸಂಘರ್ಷ : ಹುಲಿ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ : ರಾಜ್ಯದಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ತೀವ್ರ ಹೆಚ್ಚಾಗಿದೆ. ಹುಲಿ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಚಾಮರಾಜನಗರದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹಾಡಿನಕಣಿವೆ ಪೋಡು ಎಂಬಲ್ಲಿ ಈ ಘಟನೆ ಸಂಭವಿಸಿದೆ . ಮನೆಯಿಂದ ಹೊರಗೆ ಹೋಗಿದ್ದ ಬಸವ (50) ಎಂಬ ವ್ಯಕ್ತಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದಾರೆ. ಹುಲಿ ಸೆರೆಹಿಡಿಯುವಂತೆ ಗ್ರಾಮದ ಜನರು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read