
ಚಾಮರಾಜನಗರ ಜಿಲ್ಲೆಯ ಹಾಡಿನಕಣಿವೆ ಪೋಡು ಎಂಬಲ್ಲಿ ಈ ಘಟನೆ ಸಂಭವಿಸಿದೆ . ಮನೆಯಿಂದ ಹೊರಗೆ ಹೋಗಿದ್ದ ಬಸವ (50) ಎಂಬ ವ್ಯಕ್ತಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದಾರೆ. ಹುಲಿ ಸೆರೆಹಿಡಿಯುವಂತೆ ಗ್ರಾಮದ ಜನರು ಒತ್ತಾಯಿಸಿದ್ದಾರೆ.

