ಮೈಸೂರು: ಕುಡಿತಕ್ಕೆ ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಮಚ್ಚಿನಿಂದ ಹಲ್ಲೆ ಮಾಡಿ ಪತ್ನಿ ಗಾಯತ್ರಿ ಅವರನ್ನು ಕೊಲೆ ಮಾಡಿದ ಪತಿ ಪಾಪಣ್ಣ ಪರಾರಿಯಾಗಲು ಯತ್ನಿಸಿದ್ದಾನೆ. ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪತಿ ಪಾಪಣ್ಣ ಸಾಲಗಾರನಾಗಿ ಕುಡಿತದ ಚಟಕ್ಕೆ ಬಿದ್ದಿದ್ದ. ಜಮೀನು ಮಾರಿ ಹಣ ಕೊಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಆದರೆ ಇದಕ್ಕೆ ಗಾಯತ್ರಿ ಒಪ್ಪಿರಲಿಲ್ಲ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಪರಾರಿಯಾಗುವ ವೇಳೆ ಮಗನ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ಪಾಪಣ್ಣನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.