ಯಾದಗಿರಿ: ಹಲ್ಲೆಗೊಳಗಾಗಿದ್ದ ದ್ವಿತೀಯ ದರ್ಜೆ ಸಹಾಯಕಿ ಅಂಜಲಿ ಕಂಬಾನೂರ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರಾಗಿರುವ ಅಂಜಲಿ ಅವರ ಮೇಲೆ ನವೆಂಬರ್ 12 ರಂದು ಯಾದಗಿರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಕೆಲಸಕ್ಕೆ ಹೋಗುವಾಗ ದುಷ್ಕರ್ಮಿಗಳು ದಾಳಿ ಮಾಡಿದ್ದರು.
ಅಂಜಲಿ ಕಂಬಾನೂರ್ ಕಲಬುರಗಿ ಜಿಲ್ಲೆ ಶಹಾಬಾದ್ ಪಟ್ಟಣದ ನಿವಾಸಿಯಾಗಿದ್ದು, ಎರಡು ವರ್ಷದ ಹಿಂದೆ ಅಂಜಲಿ ಅವರ ಪತಿ ಗಿರೀಶ್ ರನ್ನು ಹತ್ಯೆ ಮಾಡಲಾಗಿತ್ತು. ಪತಿ ನಿಧನದ ಬಳಿಕ ಅಂಜಲಿಯವರಿಗೆ ಸರ್ಕಾರಿ ಕೆಲಸ ಸಿಕ್ಕಿತ್ತು. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ಮೃತಪಟ್ಟಿದ್ದಾರೆ.
