HomeKarnatakaBREAKING: ಪ್ರವಾಸಕ್ಕೆ ಹೋಗಲು ಅನುಮತಿ ನೀಡದ ಪತಿ: ದುಡುಕಿದ ಪತ್ನಿ ಆತ್ಮಹತ್ಯೆ

BREAKING: ಪ್ರವಾಸಕ್ಕೆ ಹೋಗಲು ಅನುಮತಿ ನೀಡದ ಪತಿ: ದುಡುಕಿದ ಪತ್ನಿ ಆತ್ಮಹತ್ಯೆ

ಮೈಸೂರು: ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನೀಡದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ನಗರದ ಸರಸ್ವತಿಪುರಂನಲ್ಲಿ ನಡೆದಿದೆ.

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ(46) ಪತ್ತೆಯಾಗಿದ್ದಾರೆ. ಸಂಧ್ಯಾ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. 25 ವರ್ಷಗಳ ಹಿಂದೆ ಬೆಂಗಳೂರು ಮೂಲದ ಸಂಧ್ಯಾ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ಮದುವೆಯಾಗಿದ್ದರು.

ಸಂಧ್ಯಾ -ರಂಗನಾಥ್ ದಂಪತಿಗೆ ಪುತ್ರ, ಪುತ್ರಿ ಇದ್ದಾರೆ. ಮಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪತಿ ಮತ್ತು ಪುತ್ರನ ಜತೆ ಸಂಧ್ಯಾ ಮೈಸೂರಿನಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ದಂಪತಿಯ ನಡುವೆ ಜಗಳವಾಗಿದೆ. ಪತಿ ಮನೆಯಿಂದ ಹೊರ ಹೋಗಿದ್ದಾಗ ಪತ್ನಿ ಸಂಧ್ಯಾ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಅಕ್ಕನ ಸಾವಿನ ಬಗ್ಗೆ ಸಹೋದರ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಹೋದರ ಗುರುಮೂರ್ತಿ ದೂರು ನೀಡಿದ್ದಾರೆ. ಸಂಧ್ಯಾ ಪತಿ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಸರಸ್ವತಿಪುಪರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular