BREAKING : ಪ್ರೀತಿಯ ಸೆಲೆಬ್ರಿಟಿಗಳೇ… : ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ನಟ ದರ್ಶನ್.!

ಬೆಂಗಳೂರು : ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆ ಇತ್ತೀಚೆಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದ ನಟ ದರ್ಶನ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದು ನಟ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read