ವಾಷಿಂಗ್ಟನ್: ನನ್ನಿಂದಲೇ ಭಾರತ -ಪಾಕಿಸ್ತಾನ ಸಂಘರ್ಷ ಸ್ಥಗಿತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಛರಿಸಿದ್ದಾರೆ.
ಭಾರತ -ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದು ನಾನೇ ಎಂದು 12ನೇ ಬಾರಿಗೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧ ನಡೆಯುವ ಸಾಧ್ಯತೆ ಇತ್ತು. ನೀವಿಬ್ಬರು ಸಂಘರ್ಷವನ್ನು ನಿಲ್ಲಿಸದಿದ್ದರೆ ವ್ಯಾಪಾರ ನಿಲ್ಲಿಸುತ್ತೇನೆ. ನಿಮ್ಮ ಜೊತೆ ಯಾವುದೇ ವ್ಯಾಪಾರ ನಡೆಸುವುದಿಲ್ಲ ಎಂದು ಎಚ್ಚರಿಸಿದ್ದೆ. ಇದರಿಂದ ಉಭಯ ದೇಶಗಳು ಸಂಘರ್ಷ ನಿಲ್ಲಿಸಿದವು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಬಹುತೇಕರಿಗೆ ಗೊತ್ತಿಲ್ಲದ ಕೆಲಸವನ್ನು ನಾನು ಮಾಡಿದ್ದೇನೆ. ನಾನು ಗಂಭೀರ ಸಮಸ್ಯೆಯನ್ನು ಪರಿಹರಿಸಿದ್ದೇನೆ ಎಂದು 12ನೇ ಬಾರಿಗೆ ಅವರು ಭಾರತ -ಪಾಕಿಸ್ತಾನ ನಡುವಿನ ಸಂಘರ್ಷ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ.