HomeKarnatakaBREAKING : ರಾಜ್ಯ ಸರ್ಕಾರದಿಂದ ನಾಲ್ವರು IAS, ಓರ್ವ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

BREAKING : ರಾಜ್ಯ ಸರ್ಕಾರದಿಂದ ನಾಲ್ವರು IAS, ಓರ್ವ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು :  ಕರ್ನಾಟಕ ಸರ್ಕಾರವು ಮಂಗಳವಾರ ಐವರು ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು ಐವರು ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಈ ಕುರಿತು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ

1. ಸುಶಮಾ ಗೋಡ್ಬೋಲೆ, ಐಎಎಸ್‌ (KN: 2008)
ಪೋಸ್ಟಿಂಗ್‌ಗಾಗಿ ಕಾಯುತ್ತಿದ್ದ ಸುಶಮಾ ಗೋಡ್ಬೋಲೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಗ್ರಂಥಾಲಯಗಳ ಆಯುಕ್ತರಾಗಿ, ಬೆಂಗಳೂರು ನೇಮಕ ಮಾಡಲಾಗಿದೆ. ಈ ಮೂಲಕ ಈ ಹುದ್ದೆಯ ಹೆಚ್ಚುವರಿ ಹೊಣೆ ನಿರ್ವಹಿಸುತ್ತಿದ್ದ ವಿದ್ಯಾಕುಮಾರಿ ಕೆ., ಐಎಎಸ್‌ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

2. ವಸಂತ ಕುಮಾರ್ ಪಿ., ಐಎಎಸ್‌ (KN: 2012)
ಕೃಷಿ ಇಲಾಖೆಯ ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ವಿಭಾಗದ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ವಸಂತ ಕುಮಾರ್ ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಿರ್ದೇಶಕರಾಗಿ (Director, Micro, Small and Medium Enterprises), ಬೆಂಗಳೂರು ನೇಮಕ ಮಾಡಲಾಗಿದೆ. ಈ ಮೂಲಕ ಈ ಹುದ್ದೆಯ ಹೆಚ್ಚುವರಿ ಹೊಣೆ ಹೊತ್ತಿದ್ದ ಡಾ. ರಾಗಪ್ರಿಯಾ ಆರ್., ಐಎಎಸ್‌ ಅವರನ್ನು ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3. ನಾಗರಾಜ ಎನ್.ಎಂ., ಐಎಎಸ್‌ (KN: 2016)
ಕರ್ನಾಟಕ ರಾಜ್ಯ ಏಡ್ಸ್‌ ನಿಯಂತ್ರಣ ಸೊಸೈಟಿಯ ಒಂಬುಡ್ಸ್‌ಮನ್‌ ಆಗಿದ್ದ ನಾಗರಾಜ ಎನ್.ಎಂ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ, ಬೆಂಗಳೂರು ನೇಮಕ ಮಾಡಲಾಗಿದೆ. ಈ ಹುದ್ದೆ ಖಾಲಿ ಇದ್ದ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ.

4. ಆಕೃತಿ ಬನ್ಸಾಲ್‌, ಐಎಎಸ್‌ (KN: 2018)
ನವದೆಹಲಿ ಕರ್ನಾಟಕ ಭವನದ ಹೆಚ್ಚುವರಿ ನಿವಾಸಿ ಆಯುಕ್ತೆ (PR) ಆಗಿದ್ದ ಆಕೃತಿ ಬನ್ಸಾಲ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಾಮರಾಜನಗರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (CEO) ನೇಮಕ ಮಾಡಲಾಗಿದೆ. ಈ ಮೂಲಕ ಈ ಹುದ್ದೆಯಲ್ಲಿದ್ದ ಮೋನಾ ರಾವತ್‌, ಐಎಎಸ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

5. ಅನನ್ಯಾ ಶ್ರೀವಾಸ್ತವ್‌, ಐಪಿಎಸ್‌ (KN: 2024)
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕರಾಗಿದ್ದ ಅನನ್ಯಾ ಶ್ರೀವಾಸ್ತವ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನವದೆಹಲಿ ಕರ್ನಾಟಕ ಭವನದ ಹೆಚ್ಚುವರಿ ನಿವಾಸಿ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಅವರು ಆಕೃತಿ ಬನ್ಸಾಲ್‌, ಐಎಎಸ್‌ ಅವರ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ.

ರೈತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ಹೆಚ್ಚಿನ ಗಮನ ಹರಿಸಲು ಸೂಚನೆ

ಹಾಸನ : ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವಂತೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ.ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ರೈತರಿಗೆ ತಾತ್ಕಾಲಿಕ ಪರಿಹಾರ,ಮಧ್ಯಂತರ ಪರಿಹಾರ, ಸೇರಿದಂತೆ ಜಿಲ್ಲೆಯಲ್ಲಿ ವಿಮೆ ಪಾವತಿಸಿರುವ ರೈತಗೆ ಪ್ರಾಮಾಣಿಕವಾಗಿ ಪರಿಹಾರ ಹಣ ದೊರಕುವಂತೆ ನಿಗಾವಹಿಸಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆೆ ಗ್ರಾಮಗಳಿಂದ ಹೊರಭಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸಿಂಗಲ್ ಫೇಸ್ ನಲ್ಲಿ ವಿದ್ಯುತ್ ನೀಡಿ ಎಂದು ನಿರ್ದೇಶನ ನೀಡಿದರು.

ಪ್ರಕೃತಿದತ್ತವಾಗಿ ದೊರಕುವ ಸೋಲಾರ್ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಲು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಅತೀ ಶ್ರೀಘ್ರವಾಗಿ ಪೂರ್ಣಗೊಳಿಸಿ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಅನುಕೂಲವಾಗುವಂತೆ ರಾತ್ರಿ ಪಾಳಿಯಲ್ಲಿ ಜನರಲ್ ಮೆಡಿಸನ್ ವೈದ್ಯರನ್ನು ನೇಮಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಿಗೆ ಸೂಚಿಸಿದರಲ್ಲದೆ ತಾಲ್ಲೂಕು ಕೇಂದ್ರದಲ್ಲಿರುವ ನುರಿತ ವೈದ್ಯರು ವಾರದಲ್ಲಿ ಒಂದು ದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಬಡ ಜನರಿಗೆ ಆರೋಗ್ಯ ಸೇವೆ ಸಲ್ಲಿಸ ಕ್ರಮಕೈಗೊಳ್ಳಲು ಸೂಚಿಸಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ 2-3 ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಆರಂಭವಾಗಬೇಕು ಈ ನಿಟ್ಟಿನಲ್ಲಿ ಭಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ-73 ಬಾಣಾವರ ಹುಳಿಯಾರು ರಸ್ತೆ ಕಾಮಗಾರಿ ಪೂರ್ಣವಾಗದೆ ಅಪಘಾತಗಳು ಹೆಚ್ಚು ನಡೆಯುತ್ತಿವೆ ಶ್ರೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲು ಅಗತ್ಯ ಕ್ರಮವಹಿಸುವಂತೆ ಅಗತ್ಯ ಕ್ರಮವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಯವರ ನೂತನ ಕಚೇರಿ ಸಂಕಿರ್ಣ, ಜಿಲ್ಲೆಯಲ್ಲಿ ನೆನೆಗುದ್ದಿಗೆ ಬಿದ್ದಿರುವ ವಿಮಾನ ನಿಲ್ದಾಣ, ಐಐಟಿ ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತಿಸÀಲಾಗಿದ್ದು ಎಲ್ಲಾ ಶಾಸಕರು ಸಹಕಾರ ನೀಡುವಂತೆ ಸಚಿವರು ತಿಳಿಸಿದರು.

ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಮಾತನಾಡಿ ಕೆರೆಗಳಲ್ಲಿ ನೀರಿಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ ಇಂತಹ ಸನ್ನಿವೇಶದಲ್ಲಿ ಅನದಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ಸಂಪರ್ಕ ಕಡಿತಗೊಳಿಸಲಾಗಿದೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕರಾದ ಸಿ.ಎನ್. ಬಾಲಕೃಷ್ಣ ಅವರು ಮಾತನಾಡಿ ಬೊರವೇಲ್ ಇರುವವರಿಗೆ ಮೇವಿನ ಕಿರು ಪೊಟ್ಟಣಗಳನ್ನು ವಿತರಣೆ ಆಗಬೇಕು ಎಂದು ತಿಳಿಸಿದರು.ಎಬಿಆರ್‌ಕೆ ಅನಧಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿಗಳನ್ನು ಖರೀಧಿಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕರಾದ ಎ.ಮಂಜು ಅವರು ಹಿಂಮತ್ ಸಿಂಕಾ ಕೈಗಾರಿಕಾ ಪ್ರಾರಂಬಿಸುವ ಸಂದರ್ಭದಲ್ಲಿ ಮಾಡಿಕೊಂಡಿರುವ ಒಪ್ಪಂದಂತೆ ವಿದ್ಯುತ್ ಅನ್ನು ಸ್ವಂತವಾಗಿ ಉತ್ಪಾದನೆ ಮಾಡಿಕೊಳ್ಳಬೇಕು ಆದರೆ ಅವರು ಅರಕಲಗೂಡಿಗೆ ಸರಬರಾಜಗುವ ವಿದ್ಯುತ್ ಅನ್ನು ಬಳಸಿಕೊಳ್ಳುತ್ತಿದ್ದಾರೆ ಇದರಿಂದ ಅರಕಲಗೂಡಿನ ಜನತೆಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕಿದೆ ಎಂದರು.

ಕುಡಿಯುವ ನೀರಿನ ಬವಣೆ ಹೆಚ್ಚಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳವಂತೆ ತಿಳಿಸಿದರು. ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಹಣ ಪಾವತಿಸಲು

ಸ್ವರೂಪ್ ಪ್ರಕಾಶ್ ಅವರು ಮಾತನಾಡಿ ಕಂದಲಿಯಲ್ಲಿ ವಿಸ್ತರಣಾ ಕೇಂದ್ರ ಮುಚ್ಚುತ್ತಾರೆ ಎಂಬ ಮಾಹಿತಿ ಇದೆ ಅದನ್ನು ಜನರ ಅನುಕೂಲಕ್ಕಾಗಿ ಅಲ್ಲಿಯೇ ಉಳಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಬೂವನಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದರು.

ಹಾಸನ ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮಗಳ ಹೆಚ್ಚು ಒತ್ತು ನೀಡಿ ಕ್ರಿಯಾ ಯೋಜನೆಯನ್ನು ತಯಾರಿಸಲು ಸೂಚಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಶಾಸಕರುಗಳಾದ ಸಿಮೆಂಟ್ ಮಂಜು ಹಾಗೂ ಹೆಚ್.ಕೆ.ಸುರೇಶ್ ಅವರು ಮಾತನಾಡಿ ಹೊಸ ಪಡಿತರ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.ರಾಜ್ಯ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್ ಅವರು ಸದರಿ ಸಭೆಯಲ್ಲಿ ಪಂಚ ಗ್ಯಾರೆಂಡಿ ಯೋಜನೆಗಳ ಪ್ರಗತಿ ಪರೀಶಿಲಿಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಜಾನುವಾರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮರುಪರಿಶೀಲನೆ ಮಾಡಿ ತಾಲ್ಲೂಕುವಾರು ವರದಿ ಸಿದ್ಧಪಡಿಸಿ ನೀಡುವಂತೆ ಸೂಚಿಸಿದರಲ್ಲದೆ, ಜಿಲ್ಲೆಗೆ 1.25 ಲಕ್ಷ ಮೇವಿನ ಕಿರು ಪೊಟ್ಟಣವನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಂಜಿತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಉಪಸ್ಥಿತರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular