HomeKarnatakaBREAKING : ಬೆಂಗಳೂರಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಪುನೀತ್ ಕೆರೆಹಳ್ಳಿ ಸೇರಿದಂತೆ...

BREAKING : ಬೆಂಗಳೂರಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರು ಅರೆಸ್ಟ್

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ, ಗೋಪಿಗೌಡ ಹಾಗೂ ಪುನೀತ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈದ್ ಮಿಲಾದ್ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಆರೋಪಿಗಳು ಗಲಾಟೆ ಮಾಡಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮೆರವಣಿಗೆ ವೇಳೆ “ನಿಮಗೆ ಯಾರು ಪರ್ಮಿಷನ್ ಕೊಟ್ಟಿದ್ದು?”, “ನೀವು ಜಿಹಾದಿಗಳು” ಎಂದು ಪುನೀತ್ ಕೆರೆಹಳ್ಳಿ ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತರುವುದು ಹಾಗೂ ವಿವಿಧ ಸಮುದಾಯಗಳ ನಡುವೆ ಶತ್ರುತ್ವ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮೆರವಣಿಗೆ ವೇಳೆ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular