BREAKING : ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ : ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ‘ಕಾಂಗ್ರೆಸ್’ ಗೆದ್ದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು’ ಜಾರಿಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ನಡುವೆ ಸ್ವಾಮಿನಾಥನ್ ಆಯೋಗದ ಪ್ರಕಾರ ಬೆಳೆಗಳ ಮೇಲೆ ಪ್ರತಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್ಪಿ) ಕಾನೂನು ಖಾತರಿಯನ್ನು ಕಾಂಗ್ರೆಸ್ ನೀಡಲಿದೆ ಎಂದು ರಾಹುಲ್ ಗಾಂಧಿ ಮಂಗಳವಾರ ಘೋಷಿಸಿದ್ದಾರೆ.

ರೈತ ಸಹೋದರರೇ, ಇಂದು ಐತಿಹಾಸಿಕ ದಿನ! ಸ್ವಾಮಿನಾಥನ್ ಆಯೋಗದ ಪ್ರಕಾರ ಪ್ರತಿಯೊಬ್ಬ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಸಮೃದ್ಧಿಯನ್ನು ಖಚಿತಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ಇದು ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ಮೊದಲ ಖಾತರಿಯಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://twitter.com/RahulGandhi/status/1757352569310163423?ref_src=twsrc%5Etfw%7Ctwcamp%5Etweetembed%7Ctwterm%5E1757352569310163423%7Ctwgr%5E26765eb2b1a579fb7f1ec10f565835bf241a99bd%7Ctwcon%5Es1_&ref_url=https%3A%2F%2Fm.economictimes.com%2Fnews%2Felections%2Flok-sabha%2Findia%2Ffarmers-protest-rahul-gandhi-promises-legal-guarantee-of-msp-if-voted-to-power%2Farticleshow%2F107660922.cms

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read