HomeKarnatakaBREAKING : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ...

BREAKING : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಸತತ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ  ಇಂದು ಭಾರೀ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಿದೆ.ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular