ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ನೆಟ್ವರ್ಕ್ ಸಮಸ್ಯೆ ಇದೆ. ಈ ರೀತಿ ನೆಟ್ವರ್ಕ್ ಸಮಸ್ಯೆ ಇರುವ 120 ಪ್ರದೇಶಗಳನ್ನು ಗುರುತಿಸಲಾಗಿದೆ.
ಶಿವಮೊಗ್ಗದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮೀಕ್ಷೆಗೆ ನೆಟ್ವರ್ಕ್ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ನೆಟ್ವರ್ಕ್ ಸಮಸ್ಯೆ ಇರುವ ಹಳ್ಳಿಗಳಲ್ಲಿ ಹೆಚ್ಚುವರಿ ನೆಟ್ವರ್ಕ್ ಕಲ್ಪಿಸಲಾಗುವುದು. ಹಳ್ಳಿಗಳಲ್ಲಿ ಕಂಪ್ಯೂಟರ್ ಗಳನ್ನು ಇಟ್ಟು ಹೆಚ್ಚುವರಿ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ರಿಮೋಟ್ ಏರಿಯಾದಲ್ಲಿ ಇರುವವರನ್ನು ಕೇಂದ್ರಕ್ಕೆ ಕರೆಸಿ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಸರ್ಕಾರ ಪ್ರತ್ಯೇಕ ವೆಬ್ಸೈಟ್ ನಿರ್ಮಿಸಿ ನೀಡಿದೆ. ಯಾರ ಹೆಸರು, ಮನೆ ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.