HomeLatest NewsBREAKING: ಚುನಾವಣಾ ಆಯೋಗದಿಂದ ಇಂದು ಮಹತ್ವದ ಸುದ್ದಿಗೋಷ್ಠಿ: ರಾಹುಲ್ ಗಾಂಧಿ ಮತಗಳ್ಳತನ ಆರೋಪ ಬಗ್ಗೆ ಸ್ಪಷ್ಟನೆ

BREAKING: ಚುನಾವಣಾ ಆಯೋಗದಿಂದ ಇಂದು ಮಹತ್ವದ ಸುದ್ದಿಗೋಷ್ಠಿ: ರಾಹುಲ್ ಗಾಂಧಿ ಮತಗಳ್ಳತನ ಆರೋಪ ಬಗ್ಗೆ ಸ್ಪಷ್ಟನೆ

ನವದೆಹಲಿ: ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ರಾಹುಲ್ ಗಾಂಧಿ ಅವರ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಲಿದೆ.

 ಕೇಂದ್ರ ಚುನಾವಣ ಆಯೋಗದಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ರಾಜಕೀಯ ಬಿರುಗಾಳಿ ಎಬ್ಬಿಸಿರುವ ಮತಗಳ್ಳತನ ಆರೋಪ, ಬಿಹಾರ ಮತಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ನಂತರ ಕೇಂದ್ರ ಚುನಾವಣಾ ಆಯೋಗ ಕರೆದ ಮೊದಲ ಸುದ್ದಿಗೋಷ್ಠಿ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಆರೋಪ, ಎಸ್ಐಆರ್ ವಿರೋಧಿಸಿ ಪ್ರತಿ ಪಕ್ಷಗಳ ನಾಯಕರು ಹೋರಾಟ ತೀವ್ರಗೊಳಿಸಿರುವ ಮಧ್ಯೆ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular