ಬೆಂಗಳೂರು: ಬೆಂಗಳೂರು ಮಹಾನಗರದ ಹಲವೆಡೆ ಮಳೆ ಬಿರುಸುಗೊಂಡಿದೆ. ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಮೆಜೆಸ್ಟಿಕ್, ಸದಾಶಿವನಗರ, ವಸಂತನಗರ, ಹೆಬ್ಬಾಳ, ಆಡುಗೋಡಿ, ಕೆಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಕೋರಮಂಗಲ, ಬನಶಂಕರಿ, ಬಸವನಗುಡಿ, ಚಂದ್ರಾ ಲೇಔಟ್, ರಾಜರಾಜೇಶ್ವರಿ ನಗರ, ರಾಜಾಜಿನಗರ, ಶಾಂತಿನಗರ, ನಾಯಂಡಹಳ್ಳಿ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಮಳೆ ಬಿರುಸುಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಆನಂದರಾವ್ ಸರ್ಕಲ್ ಸೇರಿ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.