ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ಭದ್ರಾ ಜಲಾಶಯದಿಂದ ನದಿಗೆ 3300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಸಮೀಪವಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಇಂದು ಸಂಜೆಯಿಂದ ನೀರು ಹರಿಸಲಾಗಿದೆ.
186 ಅಡಿ ಸಾಮರ್ಥ್ಯದ ಭದ್ರ ಜಲಾಶಯ ಸದ್ಯ 174 ಅಡಿಯಷ್ಟು ನೀರು ಸಂಗ್ರಹವಾಗಿದೆ. ಪ್ರಸ್ತುತ ಜಲಾಶಯಕ್ಕೆ 11,000 ಕ್ಯೂಸೆಕ್ ಒಳಹರಿವು ಇದ್ದು, 4 ಕ್ರಸ್ಟ್ ಗೇಟ್ ಮೂಲಕ 3300 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.