HomeLatest NewsBREAKING: ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: 4 ಕ್ರಸ್ಟ್ ಗೇಟ್ ಮೂಲಕ 3300 ಕ್ಯೂಸೆಕ್ ನೀರು...

BREAKING: ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: 4 ಕ್ರಸ್ಟ್ ಗೇಟ್ ಮೂಲಕ 3300 ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.

ಭದ್ರಾ ಜಲಾಶಯದಿಂದ ನದಿಗೆ 3300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಸಮೀಪವಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಇಂದು ಸಂಜೆಯಿಂದ ನೀರು ಹರಿಸಲಾಗಿದೆ.

186 ಅಡಿ ಸಾಮರ್ಥ್ಯದ ಭದ್ರ ಜಲಾಶಯ ಸದ್ಯ 174 ಅಡಿಯಷ್ಟು ನೀರು ಸಂಗ್ರಹವಾಗಿದೆ. ಪ್ರಸ್ತುತ ಜಲಾಶಯಕ್ಕೆ 11,000 ಕ್ಯೂಸೆಕ್ ಒಳಹರಿವು ಇದ್ದು, 4 ಕ್ರಸ್ಟ್ ಗೇಟ್ ಮೂಲಕ 3300 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular