BREAKING : ಯಜಮಾನಿಯರಿಗೆ ಸ್ವಾತಂತ್ರ್ಯೋತ್ಸವದ ಗಿಫ್ಟ್ : ಆ. 27 ರಂದು `ಗೃಹಲಕ್ಷ್ಮೀ ‘ಹಣ ಖಾತೆಗೆ ಜಮಾ

ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.  ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುತ್ತಿದ್ದು, ಅಂದೇ ಮಹಿಳೆಯರ ಖಾತೆಗೆ 2,000 ರೂ. ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read