HomeLatest NewsBREAKING : ಜಮ್ಮು- ಕಾಶ್ಮೀರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ.!

BREAKING : ಜಮ್ಮು- ಕಾಶ್ಮೀರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ.!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂದರ್ಬಲ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಗಂದರ್ಬಲ್ ಜಿಲ್ಲೆಯ ಅರ್ಹಾಮಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿ ವರದಿಯಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್ (CRPF) ಜಂಟಿಯಾಗಿ ಈ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗಂದರ್ಬಲ್‌ನ ಅರ್ಹಾಮಾ (Arahama) ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.ಶೋಧ ಕಾರ್ಯದ ವೇಳೆ ಭದ್ರತಾ ಪಡೆಗಳಿಗೆ ಶಂಕಾಸ್ಪದ ಚಲನವಲನ ಕಂಡುಬಂದಿದೆ. ಈ ವೇಳೆ ಉಗ್ರರಿಗೆ ಶರಣಾಗುವಂತೆ ಸೂಚಿಸಿದಾಗ, ಅವರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೈನಿಕರು ಕೂಡ ಗುಂಡಿನ ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಾಚರಣೆಯ ಹಂತ: ಮಾರ್ಚ್ 31ರ ರಾತ್ರಿ ಬಿಟ್ಟು ಬಿಟ್ಟು ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಯುದ್ಧತಂತ್ರದ ಮೂಲಕ ಪ್ರದೇಶವನ್ನು ಸುತ್ತುವರಿದವು. ಈ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಸದ್ಯ ಕಾರ್ಯಾಚರಣೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular