HomeBusinessBREAKING: ಭಾರತದ ಚಿಲ್ಲರೆ ಹಣದುಬ್ಬರ ಮಾರ್ಚ್ ನಲ್ಲಿ 5 ತಿಂಗಳ ಕನಿಷ್ಠ ಶೇ. 4.85 ಕ್ಕೆ...

BREAKING: ಭಾರತದ ಚಿಲ್ಲರೆ ಹಣದುಬ್ಬರ ಮಾರ್ಚ್ ನಲ್ಲಿ 5 ತಿಂಗಳ ಕನಿಷ್ಠ ಶೇ. 4.85 ಕ್ಕೆ ಇಳಿಕೆ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಚಿಲ್ಲರೆ ಹಣದುಬ್ಬರವು ಮಾರ್ಚ್‌ನಲ್ಲಿ 5 ತಿಂಗಳ ಕನಿಷ್ಠ ಮಟ್ಟವಾದ ಶೇ. 4.85 ಕ್ಕೆ ತಗ್ಗಿದೆ.

ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇ. 5.09 ಮತ್ತು ಮಾರ್ಚ್ 2023 ರಲ್ಲಿ ಶೇ. 5.66 ರಷ್ಟು ಇತ್ತು. ಹಿಂದೆ CPI ಆಧಾರಿತ ಹಣದುಬ್ಬರವು ಅಕ್ಟೋಬರ್ 2023 ರಲ್ಲಿ ಶೇ. 4.87 ರಷ್ಟಿತ್ತು.

ರಾಷ್ಟ್ರೀಯ ಅಂಕಿಅಂಶ ಕಚೇರಿ(ಎನ್‌ಎಸ್‌ಒ) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಆಹಾರ ಬುಟ್ಟಿ(Food basket)ಯಲ್ಲಿನ ಹಣದುಬ್ಬರವು ಮಾರ್ಚ್‌ನಲ್ಲಿ ಶೇ. 8.52 ರಷ್ಟಿತ್ತು, ಫೆಬ್ರವರಿಯಲ್ಲಿ ಶೇ. 8.66 ರಿಂದ ಕಡಿಮೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಬಿಐ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಹಣದುಬ್ಬರವನ್ನು ಶೇಕಡ 4.9 ಮತ್ತು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇಕಡ 3.8 ಎಂದು ಅಂದಾಜಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular