BREAKING : ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ‘ಇಂಡಿಗೋ ವಿಮಾನ’ ; ಬೆಂಗಳೂರಿಗೆ ವಾಪಸ್ ಆದ ಗೃಹ ಸಚಿವ ಜಿ.ಪರಮೇಶ್ವರ್.!

ಬೆಂಗಳೂರು : ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ.

ಇಂದು ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಗೃಹ ಸಚಿವ ಪರಮೇಶ್ವರ್ ಆಗಮಿಸುತ್ತಿದ್ದ  ಇಂಡಿಗೋ  ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿಲ್ಲ. ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

ಪರಮೇಶ್ವರ್ ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದರು.ಸೊರಬದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.45 ರಿಂದ 4.15ರವರೆಗೆ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಠಾಣಾ ಕಟ್ಟಡ, ಪೊಲೀಸ್ ವಸತಿಗೃಹಗಳ ಸಮುಚ್ಛಯ ಮತ್ತು ನೂತನ ಅಗ್ನಿಶಾಮಕ ಠಾಣಾ ಕಟ್ಟಡದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದರು. ಆದರೆ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿಲ್ಲ.ಈ ಹಿನ್ನೆಲೆ ಗೃಹ ಸಚಿವರು ಮತ್ತೆ ವಾಪಸ್ ಬೆಂಗಳೂರಿಗೆ ಹಿಂತಿರುಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read